ADVERTISEMENT

ಕೋವಿಡ್‌ ನಿರ್ವಹಣೆಗೆ ಭಾರತ್ ಸ್ಕೌಟ್ಸ್‌ ಸಾಥ್

​ಪ್ರಜಾವಾಣಿ ವಾರ್ತೆ
Published 19 ಮೇ 2021, 20:01 IST
Last Updated 19 ಮೇ 2021, 20:01 IST
ಪಿ.ಜಿ.ಆರ್‌.ಸಿಂಧ್ಯ
ಪಿ.ಜಿ.ಆರ್‌.ಸಿಂಧ್ಯ   

ಬೆಂಗಳೂರು: ಕೋವಿಡ್‌ ನಿರ್ವಹಣೆಗೆ ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಪರಿಹಾರ ಕ್ರಮಗಳಿಗೆ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ರಾಜ್ಯ ಶಾಖೆಯು ಕೈ ಜೋಡಿಸಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಸಹಕಾರ ನೀಡಲು ಸಿದ್ಧವಿದೆ ಎಂದು ಸಂಸ್ಥೆಯ ಮುಖ್ಯ ಆಯುಕ್ತ ಪಿ.ಜಿ. ಆರ್. ಸಿಂಧ್ಯ ತಿಳಿಸಿದ್ದಾರೆ.

’ರಾಜ್ಯದಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಮುಖಂಡರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸ್ಕೌಟ್‌–ಗೈಡ್‌ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವರ್ಷ ಸಂಸ್ಥೆಯ ವತಿಯಿಂದ 40 ಲಕ್ಷ ಮಾಸ್ಕ್‌ ಸಿದ್ಧಪಡಿಸಿ ವಿತರಿಸಲಾಗಿತ್ತು. ಅಲ್ಲದೆ, ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ₹1 ಕೋಟಿ ನೀಡಲಾಗಿತ್ತು‘ ಎಂದು ಅವರು ಹೇಳಿದ್ದಾರೆ.

’ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿರುವ ಸಂಸ್ಥೆಯ ತರಬೇತಿ ಕೇಂದ್ರಗಳನ್ನು ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಬಳಸಿಕೊಳ್ಳಬಹುದಾಗಿದೆ‘ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.