ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕವು 2025–26ನೇ ಸಾಲಿನ ವಾರ್ಷಿಕ ಕಾರ್ಯಕ್ರಮ ಯೋಜನಾ ಪುಸ್ತಕವನ್ನು ಸೋಮವಾರ ಬಿಡುಗಡೆ ಮಾಡಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ‘ಈ ಪುಸ್ತಕ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಚಟುವಟಿಕೆಗಳ ಮಾರ್ಗಸೂಚಿಯಾಗಿದೆ. ಉತ್ತಮ ನಾಗರಿಕರ ನಿರ್ಮಾಣಕ್ಕಾಗಿ, ಬೌದ್ಧಿಕ ವಿಕಸನ, ಶಿಸ್ತು ಮತ್ತು ಮಾನವೀಯ ಮೌಲ್ಯಗಳ ಕುರಿತು ತರಬೇತಿ ನೀಡಲು ಈ ಪುಸ್ತಕ ಪೂರಕವಾಗಿದೆ’ ಎಂದು ತಿಳಿಸಿದರು.
‘ಪ್ರತಿ ವರ್ಷವೂ ಸಂಸ್ಥೆ ಕೈಗೊಳ್ಳಬೇಕಾದ ಸುಸ್ಥಿರ ಅಭಿವೃದ್ಧಿ ಗುರಿ ನಿಗದಿ ಮಾಡಲಾಗುತ್ತದೆ. ಅದರ ಆಧಾರದಲ್ಲಿ ವಿವಿಧ ಕಾರ್ಯಕ್ರಮ, ಚಟುವಟಿಕೆ ಮತ್ತು ತರಬೇತಿಗಳನ್ನು ಕೈಗೊಳ್ಳಲಾಗುತ್ತದೆ. ಅವುಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶಕ ಪುಸ್ತಕ ಮುದ್ರಿಸಲಾಗುತ್ತದೆ. ಈ ಪುಸ್ತಕವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರು, ಉಪನ್ಯಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೀಡಲಾಗುತ್ತದೆ’ ಎಂದು ಹೇಳಿದರು.
ರಾಜ್ಯ ಆಯುಕ್ತರಾದ ಗೀತಾ ನಟರಾಜ್, ಎಫ್. ಗಂಗಪ್ಪ ಗೌಡ, ಸಹಾಯಕ ಆಯುಕ್ತರಾದ ಎನ್. ಶ್ರೀನಿವಾಸನ್, ರಾಧಾ ವೆಂಕಟೇಶ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.