ADVERTISEMENT

ಬೆಂಗಳೂರು | ‘ಎಸ್‌ಸಿಎಸ್‌ಪಿ–ಟಿಎಸ್‌ಪಿ ಹಣ ದುರ್ಬಳಕೆ ಬೇಡ’

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 21:40 IST
Last Updated 18 ಫೆಬ್ರುವರಿ 2026, 21:40 IST
   

ಬೆಂಗಳೂರು: ‘ಎಸ್‌ಸಿಎಸ್‌ಪಿ–ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳಬಾರದು. ಅದಕ್ಕಾಗಿ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡಬೇಕು’ ಎಂದು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ವೆಂಕಟಸ್ವಾಮಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ವಿಶೇಷ ಘಟಕ ಯೋಜನೆಯ ಸಾವಿರಾರು ಕೋಟಿ ರೂಪಾಯಿ ದುರ್ಬಳಕೆ ಆಗುತ್ತಿರುವುದು ಕಾಯ್ದೆಗೆ ಎಸಗುತ್ತಿರುದ ದ್ರೋಹ. ದಲಿತ ಸಮುದಾಯಗಳಿಗೆ ಸರ್ಕಾರ ಮಾಡುತ್ತಿರುವ ಅನ್ಯಾಯ’ ಎಂದು ಹೇಳಿದರು.

ನಿರ್ದೇಶಕರನ್ನು ವರ್ಗಾವಣೆ ಮಾಡಿ: ಡಾ.ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಹಗರಣಗಳನ್ನು ಮಾಡಿ ಅಂಬೇಡ್ಕರ್‌ ಹೆಸರಿಗೆ ಮಸಿ ಬಳಿಯುತ್ತಿರುವ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು.

ADVERTISEMENT

ಸುದ್ದಿಗೋಷ್ಠಿಯಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ಅಧ್ಯಕ್ಷ ಆರ್‌ಪಿಐ ಸತೀಶ್‌, ದಲಿತ ಸಂರಕ್ಷಣಾ ಸಮಿತಿ ಅಧ್ಯಕ್ಷ ಲಯನ್‌ ಬಾಲು, ದಲಿತ ಸಂರಕ್ಷಣಾ ಸಮಿತಿ (ಭೀಮಸೇನೆ) ಅಧ್ಯಕ್ಷ ಲಯನ್ ಮಂಜುನಾಥ್‌, ಕರ್ನಾಟಕ ಭೀಮಸೇನೆ ಅಧ್ಯಕ್ಷ ಬನಶಂಕರಿ ನಾಗು, ಪ್ರಜಾ ವಿಮೋಚನಾ ಚಳವಳಿ ಅಧ್ಯಕ್ಷ ಮುರಳಿ, ಸಮತಾ ಸೈನಿಕದಳದ ಆರ್‌. ಚಂದ್ರಶೇಖರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.