
ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಎಸ್‌ಡಿಪಿಐ ನಗರದಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಶಾಸಕ ಬಿ.ಆರ್. ಪಾಟೀಲ್ ಆಗ್ರಹಿಸಿದ್ದಾರೆ.
‘ಎಸ್‌ಡಿಪಿಐ ಕೋಮುವಾದಿಯಾಗಿದ್ದು ಸಮಾಜದಲ್ಲಿ ಸಾಮರಸ್ಯವನ್ನು ಕೆಡಿಸುತ್ತಾ ಬಂದಿದೆ. ಅದರ ಸಿದ್ಧಾಂತವು ಸಾರ್ವಜನಿಕ ಹಿತಾಸಕ್ತಿಗೆ ಪೂರಕವಾಗಿಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಿದ್ದಾಂತವನ್ನು ವಿರೋಧ ಮಾಡುವ ನಾವು, ಎಸ್‌ಡಿಪಿಐ ಸಿದ್ಧಾಂತವನ್ನೂ ವಿರೋಧಿಸುತ್ತೇವೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
‘ಈ ಎರಡೂ ಕೋಮುವಾದಿ ಗುಂಪುಗಳು ಸಮಾಜದಲ್ಲಿನ ಶಾಂತಿಯನ್ನು ಕದಡುತ್ತಲೇ ಇವೆ. ಹಾಗಾಗಿ ಸಮಾವೇಶಕ್ಕೆ ಅನುಮತಿ ನೀಡಬಾರದು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್‌ನ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ, ನಾಗೇಶ್ ಅರಳಕುಪ್ಪೆ, ದಯಾನಂದ್. ಶ್ರೀಕಂಠ ಮೂರ್ತಿ, ಜಿ.ವಿ.ಸುಂದರ್, ಪ್ರಕಾಶ್ ಕಮ್ಮರಡಿ, ಆಲಿಬಾಬಾ ಅವರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.