ADVERTISEMENT

ಸಮಿತಿ ನೇಮಕ ಕಾನೂನು ಬಾಹಿರ: ಎಸ್‌ಡಿಪಿಐ

​ಪ್ರಜಾವಾಣಿ ವಾರ್ತೆ
Published 18 ಮೇ 2020, 20:48 IST
Last Updated 18 ಮೇ 2020, 20:48 IST

ಬೆಂಗಳೂರು: ‘ಕರ್ನಾಟಕ ಪಂಚಾಯತ್‌ರಾಜ್ ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಹೊಸ ಆಡಳಿತ ಸಮಿತಿ ನೇಮಕ ಮಾಡುತ್ತಿದೆ’ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆರೋಪಿಸಿದೆ.

‘ಆಡಳಿತ ಅಧಿಕಾರಿಯನ್ನಾಗಿ ಸರ್ಕಾರಿ ಅಧಿಕಾರಿಯನ್ನು ನೇಮಿಸುವುದು ತೀರಾ ಅಸಂಬದ್ಧ. ಸರ್ಕಾರ ನಿರ್ಧಾರ ಬದಲಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಎಸ್‌ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT