ADVERTISEMENT

ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2019, 20:23 IST
Last Updated 9 ಅಕ್ಟೋಬರ್ 2019, 20:23 IST
   

ಬೆಂಗಳೂರು: ಗುರುವಾರದಿಂದ (ಅ. 10) ಮೂರು ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನಸೌಧ ಸುತ್ತಮುತ್ತ 2 ಕಿ. ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್‌ ಭಾಸ್ಕರ ರಾವ್ ಆದೇಶ ಹೊರಡಿಸಿದ್ದಾರೆ.

ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಅ. 12ರಂದು ಮಧ್ಯರಾತ್ರಿ 12 ಗಂಟೆವರೆಗೆ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ, ಮೆರವಣಿಗೆ, ಧರಣಿ, ವಿಧಾನಸೌಧ ಮುತ್ತಿಗೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

‘ಅಧಿವೇಶನ ನಡೆಯುವ ಸಂದರ್ಭದಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಗುಂಪು ಸೇರುವುದು, ಮೆರವಣಿಗೆ, ಸಭೆ ನಡೆಸುವುದು, ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು’ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.