ದಾವಣಗೆರೆ: ನವದೆಹಲಿಯಲ್ಲಿರುವ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ (ಐಎಸ್‌ಟಿಇ) ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ದಾವಣಗೆರೆಯ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಹಾಗೂ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಬಿ.ಇ. ರಂಗಸ್ವಾಮಿ ಆಯ್ಕೆಯಾಗಿದ್ದಾರೆ.ಐ.ಎಸ್.ಟಿ.ಇಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ರಂಗಸ್ವಾಮಿ 2020ರಿಂದ ಐದು ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.