ADVERTISEMENT

ಕುವೆಂಪು ಕುರಿತು ವಿಚಾರಸಂಕಿರಣ ಡಿ. 17ಕ್ಕೆ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 19:53 IST
Last Updated 9 ಡಿಸೆಂಬರ್ 2025, 19:53 IST
ಕುವೆಂಪು 
ಕುವೆಂಪು    

ಬೆಂಗಳೂರು: ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ ಹಾಗೂ ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ಇದೇ 17ರಂದು ದೆಹಲಿ ಕರ್ನಾಟಕ ಸಂಘದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ಕುರಿತು ವಿಚಾರಸಂಕಿರಣ ಆಯೋಜಿಸಲಾಗಿದೆ.

ಮಂಗಳವಾರ ನಡೆದ ಸುದ್ದಿಗೋಷ್ಠಿ
ಯಲ್ಲಿ ಮಾತನಾಡಿದ ಸಾಹಿತಿ ಹಂ.ಪ. ನಾಗರಾಜಯ್ಯ, ಟ್ರಸ್ಟ್‌ನ ಅಧ್ಯಕ್ಷ ಎಚ್.ಕೆ. ರಾಮು, ‘ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿಚಾರಸಂಕಿರಣ ಉದ್ಘಾಟಿಸಲಿದ್ದಾರೆ. ಬೇಲಿಮಠದ ಶಿವರುದ್ರ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ
ನಿಶ್ಚಲಾನಂದನಾಥ ಸ್ವಾಮೀಜಿ, ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರ ವನ್ನು ಹಾಗೂ ಹಿಂದಿ ಭಾಷೆಗೆ ಅನುವಾದ
ಗೊಂಡಿರುವ ಕುವೆಂಪು ಅವರ ‘ರಾಮಾಯಣ ದರ್ಶನಂ’ ಗ್ರಂಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಲಿದ್ದಾರೆ’ ಎಂದರು.

‘ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಜಿ.ಟಿ. ದೇವೇಗೌಡ, ವಿಶ್ರಾಂತ ಕುಲಪತಿ
ಕೆ.ಎಸ್. ರಂಗಪ್ಪ, ದೆಹಲಿ ಕರ್ನಾಟಕದ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ್ ಭಾಗವಹಿಸಲಿದ್ದಾರೆ’ ಎಂದರು.

ADVERTISEMENT