ADVERTISEMENT

31 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2023, 16:16 IST
Last Updated 30 ಜುಲೈ 2023, 16:16 IST
ಚನ್ನೋಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡಿರುವ ಶಿಕ್ಷಕ ತಿಮ್ಮಯ್ಯ ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.
ಚನ್ನೋಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡಿರುವ ಶಿಕ್ಷಕ ತಿಮ್ಮಯ್ಯ ಅವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.   

ದಾಬಸ್ ಪೇಟೆ: ನೆಲಮಂಗಲ ತಾಲ್ಲೂಕು ಸೋಂಪುರ ಹೋಬಳಿ ಚನ್ನೋಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 31 ವರ್ಷಗಳಿಂದ ಕಾರ್ಯ ನಿರ್ವಹಿಸಿ ನಿಡವಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಯಾಗಿರುವ ಶಿಕ್ಷಕ ತಿಮ್ಮಯ್ಯ ಅವರಿಗೆ ಊರಿನ ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ಬೀಳ್ಕೊಡುಗೆ ನೀಡಿದರು.

‘1992ರ ಸೆ.9ರಂದು ಶಿಕ್ಷಕನಾಗಿ ಚನ್ನೋಹಳ್ಳಿ ಗ್ರಾಮಕ್ಕೆ ಬಂದೆ. ಅಂದಿನಿಂದ ಇಂದಿನವರೆಗೆ ಗ್ರಾಮಸ್ಥರು ನನ್ನನ್ನು ಮನೆಯ ಮಗನಂತೆ ನೋಡಿಕೊಂಡಿದ್ದಾರೆ. ನನ್ನ ಪ್ರತಿ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದಾರೆ. ಇವತ್ತು ನನ್ನ ಕೈಲಿ ಓದಿದಂತಹ ವಿದ್ಯಾರ್ಥಿಗಳು ಸಮಾಜದಲ್ಲಿ ಒಳ್ಳೆಯ ಸ್ಥಾನಮಾನದಲ್ಲಿ ಇದ್ದು ನನಗಿಂತ ಎತ್ತರಕ್ಕೆ ಬೆಳೆದಿದ್ದಾರೆ. ಇದನ್ನು ಕಂಡಾಗ ನನಗೆ ಸಂತೋಷವಾಗುತ್ತದೆ’ ಎಂದು ತಿಮ್ಮಯ್ಯ ಹೇಳಿದರು.

ಶಿಕ್ಷಕರಾದ ಮುನಿ ರಾಜಮ್ಮ, ರೇಖಾ, ಗ್ರಾಮದ ಹಿರಿಯರಾದ ಹನುಮಂತರಾಯಪ್ಪ, ಕೃಷ್ಣಪ್ಪ, ಗೋವಿಂದರಾಜು, ಕುಮಾರಸ್ವಾಮಿ, ರಾಮೇಗೌಡ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.