ADVERTISEMENT

ಸಾರಿಗೆ ಇಲಾಖೆ ಹಾಗೂ ಬೆಂಗಳೂರು ನಗರ ಪೊಲೀಸ್ ಇಲಾಖೆಯು ವತಿಯಿಂದ ‘ಸೇಫಥಾನ್-2025’

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2025, 15:53 IST
Last Updated 28 ಫೆಬ್ರುವರಿ 2025, 15:53 IST
<div class="paragraphs"><p>ಬೆಂಗಳೂರು ಪೊಲೀಸ್</p></div>

ಬೆಂಗಳೂರು ಪೊಲೀಸ್

   

ಬೆಂಗಳೂರು: ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲು ಸಾರಿಗೆ ಇಲಾಖೆ ಹಾಗೂ ಬೆಂಗಳೂರು ನಗರ ಪೊಲೀಸ್ ಇಲಾಖೆಯು ನಗರದ ಕಂಠೀರವ ಕ್ರೀಡಾಂಗಣದಲ್ಲಿ ‘ಸೇಫಥಾನ್-2025’ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 1ರಂದು ಬೆಳಿಗ್ಗೆ 6ಕ್ಕೆ ಚಾಲನೆ ನೀಡಲಿದ್ದಾರೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಅಂತರರಾಷ್ಟ್ರೀಯ ಅಥ್ಲೀಟ್ ಅರ್ಜುನ್ ದೇವಯ್ಯ, ನಟಿ ಪ್ರಣೀತಾ ಸುಭಾಷ್ ಹಾಗೂ ಚಿತ್ರರಂಗದ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ.

ADVERTISEMENT

ನಡಿಗೆ, ಓಟ ಮತ್ತು ಸೈಕ್ಲಿಂಗ್ ಮೂಲಕ ಐದು ಕಿ.ಮೀ ದೂರದ ಸೇಫಥಾನ್ ಅನ್ನು ಪೂರ್ಣಗೊಳಿಸಬೇಕು. ಸೇಫಾಥಾನ್‌ನಲ್ಲಿ ಭಾಗವಹಿಸಲು 10 ಸಾವಿರಕ್ಕೂ ಹೆಚ್ಚು ಜನ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರ ಆರೋಗ್ಯ ತಪಾಸಣೆಗೆ ಸ್ಥಳದಲ್ಲೇ ವ್ಯವಸ್ಥೆ ಮಾಡಲಾಗಿದೆ. ಸೇಂಟ್‌ ಜೊಸೆಫ್ಸ್ ಹೈಸ್ಕೂಲ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.