ADVERTISEMENT

ಬೆಂಗಳೂರು: 150ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 14:32 IST
Last Updated 5 ನವೆಂಬರ್ 2025, 14:32 IST
ಸೈಯದ್ ಅಸ್ಲಾಂ 
ಸೈಯದ್ ಅಸ್ಲಾಂ    

ಬೆಂಗಳೂರು: 150ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೈಯದ್‌ ಅಸ್ಲಂ ಅಲಿಯಾಸ್‌ ಅಸ್ಲಂ(40) ಬಂಧಿತ ಆರೋಪಿ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಹಾವೇರಿ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಅಪರಾಧ ಕೃತ್ಯ ಎಸಗಿದ್ದ.

ADVERTISEMENT

ಸ್ವತ್ತು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲು ವಿಶೇಷ ತಂಡ ರಚಿಸಲಾಗಿತ್ತು. ವಿವಿಧೆಡೆ ಹುಡುಕಾಟ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು ಎಂದು ಪೊಲೀಸರು ಹೇಳಿದರು.

ಎಂಟು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ನಾರಾಯಣಸ್ವಾಮಿ (35) ಎಂಬಾತನನ್ನು ಯಲಹಂಕ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ಸ್ವಂತ ಊರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ದಾರನಾಯಕನಪಾಳ್ಯ. ಯಲಹಂಕ ಉಪನಗರ, ವಿದ್ಯಾರಣ್ಯಪುರ, ಗೌರಿಬಿದನೂರು, ಚಿಕ್ಕಬಳ್ಳಾಪುರ ಗ್ರಾಮಾಂತರ, ಗುಡಿಬಂಡೆ ಹಾಗೂ ಉಡುಪಿಯ ಮಣಿಪಾಲ್‌ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.