ADVERTISEMENT

ಹೋಟೆಲ್‌ಗಳಲ್ಲಿ ಸೇವೆಗೆ ಅವಕಾಶ: ಸ್ವಾಗತಾರ್ಹ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 19:31 IST
Last Updated 19 ಜೂನ್ 2021, 19:31 IST

ಬೆಂಗಳೂರು:‘ಹೋಟೆಲ್‌ಗಳಲ್ಲಿ ಸೋಮವಾರದಿಂದ ಶೇ 50ರಷ್ಟು ಆಸನ ವ್ಯವಸ್ಥೆಯೊಂದಿಗೆ ಸಂಜೆ 5 ಗಂಟೆಯವರೆಗೆ ಸೇವೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ’ ಎಂದುಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ.

‘ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿದೆ. ಹೋಟೆಲ್‌ ಸಿಬ್ಬಂದಿ ಹಾಗೂ ಕೆಲಸಗಾರರು ಕೋವಿಡ್‌ ಲಸಿಕೆ ಹಾಕಿಸಿಕೊಂಡಿದ್ದಾರೆ. ಗ್ರಾಹಕರ ಆರೋಗ್ಯ ದೃಷ್ಟಿಯಿಂದಹೋಟೆಲ್‌ಗಳಲ್ಲಿ ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು.’

‘ಗ್ರಾಹಕರು ಹೋಟೆಲ್‌ಗಳಲ್ಲಿ ಸಮಯ ವ್ಯರ್ಥ ಮಾಡಬಾರದು. ಅಂತರ ಕಾಯ್ದುಕೊಳ್ಳುವ ಮೂಲಕ ಸಹಕರಿಸಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.