ADVERTISEMENT

ಸಹಾಯಕ ಎಂಜಿನಿಯರ್‌ಗಳು ಪೊಲೀಸ್ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 17:00 IST
Last Updated 15 ಫೆಬ್ರುವರಿ 2021, 17:00 IST

ಬೆಂಗಳೂರು: ನಕಲಿ ಖಚಿತ ಅಳತೆ ವರದಿ (ಸಿಡಿಆರ್‌) ಸೃಷ್ಟಿಸಿ ಬಡಾವಣೆ ಯೋಜನೆಗಳಿಗೆ ಅನುಮತಿ ನೀಡಿದ್ದ, ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಹಕರಿಸುತ್ತಿದ್ದ ಆರೋಪದಡಿ ಬಂಧಿಸಲಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಾಲ್ವರು ಸಹಾಯಕ ಎಂಜಿನಿಯರ್‌ಗಳನ್ನು ಹೆಚ್ಚಿನ ವಿಚಾರಣೆಗಾಗಿ ಶೇಷಾದ್ರಿಪುರ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬನಶಂಕರಿ ಕಚೇರಿಯ ಎಂ.ಎಸ್. ಶಂಕರ್ ಮೂರ್ತಿ, ಆರ್‌.ಟಿ.ನಗರ ಕಚೇರಿಯ ಕೆ.ಎನ್. ರವಿಕುಮಾರ್, ಡಿ. ಶ್ರೀರಾಮ್, ಶಬ್ಬೀರ್ ಅಹಮ್ಮದ್ ಹಾಗೂ ಶ್ರೀನಿವಾಸ್ ಅವರನ್ನು ಬಂಧಿಸಿದ್ದರು. ಆರಂಭದಲ್ಲಿ ಶ್ರೀನಿವಾಸ್‌ ಅವರನ್ನು ಮಾತ್ರ ಕಸ್ಡಡಿಗೆ ಪಡೆದು ವಿಚಾರಣೆ ನಡೆಸಿದ್ದರು.

ಆದರೆ, ಉಳಿದ ನಾಲ್ವರು ನ್ಯಾಯಾಂಗ ಬಂಧನದಲ್ಲಿದ್ದರು. ಅವರನ್ನು ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ, ಶಂಕರಮೂರ್ತಿ, ರವಿಕುಮಾರ್, ಶಬ್ಬೀರ್ ಅಹಮ್ಮದ್ ಹಾಗೂ ಡಿ. ಶ್ರೀರಾಮ್ ಅವರನ್ನು ಪೊಲೀಸರ ಕಸ್ಟಡಿಗೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.