ADVERTISEMENT

ಬೆಂಗಳೂರು | ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌: ವಿದ್ಯಾರ್ಥಿ ವೇತನ ವಿತರಣೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 15:48 IST
Last Updated 19 ಆಗಸ್ಟ್ 2025, 15:48 IST
ಶೇಷಾದ್ರಿಪುರಂ ಅಕಾಡೆಮಿ ಆಫ್ ಬ್ಯುಸಿನೆಸ್‌ ಸ್ಟಡೀಸ್‌ನಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. 
ಶೇಷಾದ್ರಿಪುರಂ ಅಕಾಡೆಮಿ ಆಫ್ ಬ್ಯುಸಿನೆಸ್‌ ಸ್ಟಡೀಸ್‌ನಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.    

ಬೆಂಗಳೂರು: ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌ನ 14ನೇ ಮೆರಿಟ್ ವಿದ್ಯಾರ್ಥಿವೇತನ ಸಮಾರಂಭ ಮಂಗಳವಾರ ಶೇಷಾದ್ರಿಪುರಂ ಅಕಾಡೆಮಿ ಆಫ್ ಬ್ಯುಸಿನೆಸ್‌ ಸ್ಟಡೀಸ್‌ನಲ್ಲಿ ನಡೆಯಿತು.

ಅಕಾಡೆಮಿ ಆಫ್ ಬ್ಯುಸಿನೆಸ್‌ ಸ್ಟಡೀಸ್‌ನ ಪಿಯು ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ₹10 ಲಕ್ಷ ವಿದ್ಯಾರ್ಥಿವೇತನ ವಿತರಿಸಲಾಯಿತು.

ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌ನ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ ಮಾತನಾಡಿ, ‘ಕೈಗೆಟುಕುವ ಬೆಲೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಯಾವುದೇ ತಂತ್ರಜ್ಞಾನವು ಮಿದುಳಿನ ಶಕ್ತಿಗಿಂತ ಹೆಚ್ಚಿಲ್ಲ’ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಸಿ.ಎಸ್. ಕರಿಗಾರ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌ನ ಗೌರವ ಉಪಾಧ್ಯಕ್ಷ ಟಿ.ಎಸ್. ಹೆಂಜಾರಪ್ಪ, ಶೇಷಾದ್ರಿಪುರಂ ಶೈಕ್ಷಣಿಕ ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಎಂ.ಎಸ್. ನಟರಾಜ್, ಶೇಷಾದ್ರಿಪುರಂ ಶಿಕ್ಷಣ ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಬಿ.ಎಂ. ಪಾರ್ಥಸಾರಥಿ, ಶೇಷಾದ್ರಿಪುರಂ ಅಕಾಡೆಮಿ ಆಫ್ ಬ್ಯುಸಿನೆಸ್ ಸ್ಟಡೀಸ್‌ನ ಪ್ರಾಂಶುಪಾಲ ಜಯರಾಮ್, ಶೇಷಾದ್ರಿಪುರಂ ಸ್ವತಂತ್ರ ಪಿಯು ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಮತ್ತು ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.