ADVERTISEMENT

ವಿದ್ಯಾರ್ಥಿ ನಿಲಯದಲ್ಲಿ ಏಳು ಜನರಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 19:31 IST
Last Updated 12 ಮಾರ್ಚ್ 2021, 19:31 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ವಿದ್ಯಾಪೀಠ ಸರ್ಕಾರಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ನಿಲಯದ 7 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.

ಸೋಂಕಿನ ಲಕ್ಷಣ ಇದ್ದವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಶುಕ್ರವಾರ ವರದಿ ಬಂದಿದೆ. ಎಲ್ಲರೂ ಸಂಪರ್ಕಕ್ಕೆ ಸಿಕ್ಕಿದ್ದು, ಅವರೊಂದಿಗೆ ಸಮಾಲೋಚನೆ ನಡೆಸಿ ಜಯನಗರದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರಿಗೂ ನೆಗೆಟಿವ್ ವರದಿ ಬಂದಿದೆ. ಅವರ ಮೇಲೆ ನಿಗಾ ಇಡಲಾಗಿದ್ದು, ಸೋಂಕಿನ ಲಕ್ಷಣ ಕಾಣಿಸಿದರೆ ಮತ್ತೆ ಪರೀಕ್ಷೆ ನಡೆಸಲಾಗುವುದು. ಏಳು ದಿನಗಳ ಬಳಿಕ ಮತ್ತೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಿಳಿಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.