ADVERTISEMENT

ಪೊಲೀಸರ ದೌರ್ಜನ್ಯ; ಲೈಂಗಿಕ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 20:43 IST
Last Updated 9 ಮಾರ್ಚ್ 2021, 20:43 IST
ಲೈಂಗಿಕ ಕಾರ್ಯಕರ್ತೆಯರು ನಗರದಲ್ಲಿರುವ ಮಹಿಳಾ ಆಯೋಗದ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು
ಲೈಂಗಿಕ ಕಾರ್ಯಕರ್ತೆಯರು ನಗರದಲ್ಲಿರುವ ಮಹಿಳಾ ಆಯೋಗದ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ‘ಪೊಲೀಸರು ನಮ್ಮ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ’ ಎಂದು ಆರೋಪಿಸಿ ಲೈಂಗಿಕ ಕಾರ್ಯಕರ್ತೆಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಮಹಿಳಾ ಆಯೋಗದ ಕಚೇರಿ ಎದುರು ಸೇರಿದ್ದ ಪ್ರತಿಭಟನಕಾರರು, ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

‘ನಮ್ಮ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಬಸ್ ನಿಲ್ದಾಣಗಳಿಗೆ ಹೋಗಿಬರಲು ನಮಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಪೊಲೀಸರು ಮನಬಂದಂತೆ ಲಾಠಿಯಿಂದ ಹೊಡೆಯುತ್ತಿದ್ದಾರೆ. ಇದರಿಂದ ಹಲವರ ಕೈ, ಕಾಲುಗಳಿಗೆ ಗಾಯಗಳಾಗಿವೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸುತ್ತಿರುವ ಇಂಥ ಸಂದರ್ಭದಲ್ಲೇ, ನಾವೆಲ್ಲರೂ ಬೀದಿಗೆ ಬಂದು ಹೋರಾಟ ಮಾಡುತ್ತಿದ್ದೇವೆ’ ಎಂದು ಪ್ರತಿಭಟನಕಾರರು ಹೇಳಿದರು.

ADVERTISEMENT

‘ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯವನ್ನು ತಡೆಯಬೇಕು. ನಮ್ಮನ್ನು ಕೆಟ್ಟ ದೃಷ್ಟಿಯಲ್ಲಿ ನೋಡುವುದನ್ನು ಮೊದಲು ನಿಲ್ಲಿಸಬೇಕು. ದೌರ್ಜನ್ಯದ ಬಗ್ಗೆ ಹಲವು ಬಾರಿ ಆಯೋಗಕ್ಕೆ ದೂರು ನೀಡಲಾಗಿದೆ. ಇಷ್ಟಾದರೂ ಪೊಲೀಸರ ದೌರ್ಜನ್ಯ ನಿಂತಿಲ್ಲ’ ಎಂದೂ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.