ADVERTISEMENT

ಮಾತುಕತೆಗೆ ಕರೆದು ಲೈಂಗಿಕ ದೌರ್ಜನ್ಯ: ಯುವತಿ ದೂರು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2022, 21:28 IST
Last Updated 12 ಆಗಸ್ಟ್ 2022, 21:28 IST
   

ಬೆಂಗಳೂರು: ಉದ್ಯಮದ ಬಗ್ಗೆ ಮಾತುಕತೆ ಗೆಂದು ಯುವತಿಯೊಬ್ಬರನ್ನು ಹೋಟೆಲ್‌ಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಗರದ ನಿವಾಸಿಯಾಗಿರುವ ಯುವತಿ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಮಿಳು ನಾಡಿನ ನಿವಾಸಿಯಾಗಿರುವ ಆರೋಪಿ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಉದ್ಯಮಿ ಆಗಿರುವ ಆರೋಪಿ, ತಮಿಳುನಾಡಿನಿಂದ ಇತ್ತೀಚೆಗೆ ನಗರಕ್ಕೆ ಬಂದಿದ್ದ. ಸಂಬಂಧಿಕರೊಬ್ಬರ ಮೂಲಕ ಯುವತಿಯನ್ನು ಸಂಪರ್ಕಿಸಿದ್ದ ಈತ, ಉದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಬೇಕೆಂದು ಹೇಳಿ ಆಗಸ್ಟ್ 6ರಂದು ಹೋಟೆಲ್‌ಗೆ ಕರೆಸಿಕೊಂಡಿದ್ದ. ಇದೇ ವೇಳೆ ಯುವತಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ ಜೀವ ಬೆದರಿಕೆಯೊಡ್ಡಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಯುವತಿಯು ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ನಂತರವೇ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.