ಬೆಂಗಳೂರು: ‘ಡಿಜೆ ಹಳ್ಳಿ (ದೇವರಜೀವನಹಳ್ಳಿ) ಪೊಲೀಸ್ ಠಾಣೆ ಇನ್‍ಸ್ಪೆಕ್ಟರ್ ಸುನಿಲ್ ಅವರು ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ 36 ವರ್ಷದ ಸಂತ್ರಸ್ತೆಯೊಬ್ಬರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
‘ಉಪ ನೋಂದಾಣಾಧಿಕಾರಿ ಕಚೇರಿಯಲ್ಲಿ ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ಫೋಟೊ ಹಾಗೂ ವಿಡಿಯೊ ಇಟ್ಟುಕೊಂಡಿದ್ದಾರೆ. ವಿಷಯ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ’ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
‘ಇನ್‌ಸ್ಪೆಕ್ಟರ್ ಅವರು ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ನಿರ್ಮಿಸಿಕೊಡುತ್ತೇನೆ ಎಂದು ಹೇಳಿ ಎಂಟನೇ ಮೈಲಿನಲ್ಲಿರುವ ಮನೆ ಹಾಗೂ ಹೋಟೆಲ್‍ಗೆ ಕರೆದೊಯ್ದು ಕೃತ್ಯ ಎಸಗಿದ್ದರು’ ಎಂದು ಮಹಿಳೆ ಆರೋಪಿಸಿದ್ದಾರೆ. ವಾಟ್ಸ್‌ಆ್ಯಪ್ ಸಂದೇಶಗಳನ್ನೂ ಮಹಿಳೆ ಬಹಿರಂಗಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.