ADVERTISEMENT

ಮದುವೆ ಆಗುವುದಾಗಿ ಲೈಂಗಿಕ ದೌರ್ಜನ್ಯ; ಕ್ರಿಕೆಟ್ ತರಬೇತುದಾರನ ವಿರುದ್ಧ ತನಿಖೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 23:33 IST
Last Updated 25 ಸೆಪ್ಟೆಂಬರ್ 2025, 23:33 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

ಸಾಂದರ್ಭಿಕ ಚಿತ್ರ

ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿ ಕ್ರಿಕೆಟ್ ತರಬೇತುದಾರ ಎ.ಬಿ.ಮ್ಯಾಥ್ಯು ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಕೋಣನಕುಂಟೆ ಠಾಣೆ ಪೊಲೀಸರು ಚುರುಕುಗೊಳಿಸಿದ್ದಾರೆ.

ADVERTISEMENT

ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದರು. ದೂರು ಆಧರಿಸಿ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿ ಡಿಸಿಪಿಗೆ ಪತ್ರ ಬರೆಯಲಾಗಿತ್ತು. ಆಯೋಗದ ಅಧಿಕಾರಿಗಳ ಸೂಚನೆ ಬೆನ್ನಲ್ಲೇ ಕ್ರಿಕೆಟ್‌ ಕೋಚ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.‌

‘ಕೆಲವು ಯುವತಿಯರ ಜೊತೆಗಿರುವ ಖಾಸಗಿ ಕ್ಷಣದ ದೃಶ್ಯವನ್ನು ಆರೋಪಿ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿರುವ ಆರೋಪ ಇದೆ. ಮ್ಯಾಥ್ಯು ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಬಳಿಕ ಅವರು ಏನೆಲ್ಲಾ ಕೃತ್ಯ ಎಸಗಿದ್ದಾರೆ ಎಂಬುದು ಗೊತ್ತಾಗಲಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.