ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತೆಯೊಬ್ಬರಿಗೆ ಅಪರಿಚಿತನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಜುಲೈ 25ರಂದು ರಾತ್ರಿ 10 ಗಂಟೆ ಸುಮಾರಿಗೆ ಅಪರಿಚಿತನೊಬ್ಬ, ಪಿಪಿಇ ಕಿಟ್ ಧರಿಸಿ ಕೇಂದ್ರಕ್ಕೆ ಬಂದಿದ್ದ. ಆತನಿಂದಲೇ ಲೈಂಗಿಕ ಕಿರುಕುಳ ಆಗಿದೆ ಎಂದು ಸೋಂಕಿತೆ, ಚಿಕಿತ್ಸಾ ಕೇಂದ್ರದ ನೊಡಲ್ ಅಧಿಕಾರಿಗೆ ದೂರು ನೀಡಿದ್ದರು. ಅದನ್ನು ಆಧರಿಸಿ ವಿಕ್ಟೋರಿಯಾ ಆಸ್ಪತ್ರೆ ಮುಖ್ಯಸ್ಥ ಡಾ. ಬಾಲಾಜಿ ಪೈ ಅವರು ಠಾಣೆಗೆ ದೂರು ನೀಡಿದ್ದಾರೆ.
'ಲೈಂಗಿಕ ಕಿರುಕುಳ (ಐಪಿಸಿ 354-ಎ)ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಿಪಿಇ ಕಿಟ್ ಧರಿಸಿ ಆಸ್ಪತ್ರೆಗೆ ಬಂದಿದ್ದ ಆರೋಪಿ ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ' ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.