ADVERTISEMENT

ಲೈಂಗಿಕ ದೌರ್ಜನ್ಯ ಉಬರ್ ಚಾಲಕ ಬಂಧನ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 22:34 IST
Last Updated 14 ಮಾರ್ಚ್ 2020, 22:34 IST

ಬೆಂಗಳೂರು: ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಉಬರ್ ಚಾಲಕ ನಾಗರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಮಹದೇವಪುರದಲ್ಲಿ ವಾಸವಿದ್ದ ಆರೋಪಿ ವಿರುದ್ಧ25 ವರ್ಷದ ಸಂತ್ರಸ್ತೆ ದೂರು ನೀಡಿದ್ದರು. ಅದರನ್ವಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು’ ಎಂದು ಪೊಲೀಸರು ಹೇಳಿದರು.

‘ಹೊಸೂರು ರಸ್ತೆಯಲ್ಲಿ ವಾಸವಿರುವ ಯುವತಿ ಇದೇ 7ರಂದು ಸ್ನೇಹಿತರ ಮನೆಗೆ ಕ್ಯಾಬ್‌ನಲ್ಲಿ ಹೊರಟಿದ್ದರು. ಮಾರ್ಗಮಧ್ಯೆಯೇ ಕ್ಯಾಬ್ ನಿಲ್ಲಿಸಿದ್ದ ಆರೋಪಿ, ಯುವತಿಯ ಅಂಗಾಂಗಗಳನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದ. ಯುವತಿ ಸಹಾಯಕ್ಕಾಗಿ ಕಿರುಚಾಡುತ್ತಿದ್ದಂತೆ ನಿಗದಿತ ಸ್ಥಳದಿಂದ 100 ಮೀಟರ್ ದೂರದಲ್ಲಿ ಇಳಿಸಿ ಪರಾರಿಯಾಗಿದ್ದ’ ಎಂದರು.

ADVERTISEMENT

‘ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡು ಓಡಾಡುತ್ತಿದ್ದ. ಮೊಬೈಲ್ ಲೋಕೇಶನ್ ನೀಡಿದ ಸುಳಿವು ಆಧರಿಸಿ ಆತನನ್ನು ಸೆರೆ ಹಿಡಿಯಲಾಯಿತು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.