ಬೆಂಗಳೂರು: ರಸ್ತೆಯಲ್ಲಿ ನಡೆದು ತೆರಳುವ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಸ್ಸಾಂನ ಇಸ್ಲಾಂವುದ್ದೀನ್ (31) ಬಂಧಿತ ಆರೋಪಿ.
36 ವರ್ಷದ ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
‘ದೂರುದಾರ ಮಹಿಳೆಯು ಜನವರಿ 23ರಂದು ಬೆಳಿಗ್ಗೆ 8.30ರ ಸುಮಾರಿಗೆ ಬನಶಂಕರಿ ಎರಡನೇ ಹಂತದ ರಸ್ತೆಯೊಂದರಲ್ಲಿ ನಡೆದು ತೆರಳುತ್ತಿದ್ದರು. ಒಂಟಿಯಾಗಿ ತೆರಳುತ್ತಿದ್ದ ಮಹಿಳೆಯನ್ನು ಗಮನಿಸಿದ ಆರೋಪಿ, ಮಹಿಳೆಯ ಹಿಂಭಾಗಕ್ಕೆ ಹೊಡೆದು ಪರಾರಿಯಾಗಿದ್ದ’ ಎಂದು ಪೊಲೀಸರು ಹೇಳಿದರು.
‘ಮಹಿಳೆ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಬರೆದುಕೊಂಡಿದ್ದರು. ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.
‘ಆರೋಪಿ ಇದೇ ರೀತಿ ಹಲವು ಕಡೆ ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.