
ಬಂಧನ
ಬೆಂಗಳೂರು: ಮಹದೇವಪುರದ ಫಿನಿಕ್ಸ್ ಮಾಲ್‍ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗುವಾಹಟಿಯ ಮನೋಜ್ (27) ಬಂಧಿತ ಆರೋಪಿ. ಮಹದೇವಪುರದಲ್ಲಿ ವಾಸವಾಗಿದ್ದ ಈತ, ಫುಡ್ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಪಶ್ಚಿಮ ಬಂಗಾಳದ ಸಂತ್ರಸ್ತ ಯುವತಿಯು ಡಿಸೆಂಬರ್ 25ರಂದು ರಾತ್ರಿ ಮಾಲ್‍ಗೆ ಬಂದಿದ್ದರು. ಮಾಲ್‍ನಲ್ಲಿ ನಡೆಯುತ್ತಿದ್ದ ಕ್ರಿಸ್‍ಮಸ್ ಸಂಭ್ರಮಾಚರಣೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದರು. ಇದೇ ಮಾಲ್‍ಗೆ ಬಂದಿದ್ದ ಮನೋಜ್, ಜನಜಂಗುಳಿಯ ನಡುವೆ ಯುವತಿಯು ಖಾಸಗಿ ಅಂಗಾಂಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯ ಅನುಚಿತ ವರ್ತನೆಯಿಂದ ಆತಂಕಗೊಂಡ ಯುವತಿ, ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ, ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.