ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗಗಳ ವತಿಯಿಂದ ಆಯೋಜಿಸಿದ್ದ ಶಕ್ತಿ ಇವಾಹ್–2.0 ಕುರಿತ ಅಂತರರಾಷ್ಟ್ರೀಯ ವಿದ್ಯುತ್ ವಾಹನ ತಂತ್ರಜ್ಞಾನ ಕುರಿತ ಐದು ದಿನಗಳ ಕಾರ್ಯಾಗಾರ
ಯಲಹಂಕ: ವಿದ್ಯುತ್‌ಚಾಲಿತ ವಾಹನಗಳ ಬಳಕೆಯಿಂದ ಪರಿಸರದ ಸಂರಕ್ಷಣೆಗೆ ಹಾಗೂ ಇತರೆ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅನುಕೂಲವಾಗುತ್ತದೆ ಎಂದು ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಎಚ್.ಸಿ. ನಾಗರಾಜ್ ಹೇಳಿದರು.
ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಹಾಗೂ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗಗಳ ವತಿಯಿಂದ ಆಯೋಜಿಸಿದ್ದ ‘ಶಕ್ತಿ ಇವಾಹ್–2.0’ ಅಂತರರಾಷ್ಟ್ರೀಯ ವಿದ್ಯುತ್ ವಾಹನ ತಂತ್ರಜ್ಞಾನ ಕುರಿತ ಐದು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದರು.
‘ಸಾಂಪ್ರದಾಯಿಕ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳಿಂದ ಚಲಿಸುತ್ತಿರುವ ವಾಹನಗಳಿಂದ ಪರಿಸರದ ಮೇಲೆ ಆಗುತ್ತಿರುವ ದುಷ್ಪರಿಣಾಮವನ್ನು ಗಣನೀಯವಾಗಿ ನಿಯತ್ರಿಸಲು ವಿದ್ಯುತ್ ವಾಹನಗಳ ಅಧಿಕ ಬಳಕೆ ಅನಿವಾರ್ಯ’ ಎಂದರು.
ಟಾಟಾ ಎಲೆಕ್ಸಿ ಸಂಸ್ಥೆಯ ಹಿರಿಯ ತಾಂತ್ರಿಕ ನಿರ್ವಾಹಕ ಗೋಪಿನಾಥ್ ಸೆಲ್ವರಾಜ್, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕ ಎಸ್. ದಾಸಪ್ಪ, ಸಂಸ್ಥೆಯ ಅಕಾಡೆಮಿಕ್ ಡೀನ್ ವಿ. ಶ್ರೀಧರ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಮನೋಹರ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಕಪಿಲನ್ ಉಪಸ್ಥಿತರಿದ್ದರು.
ಕಾರ್ಯಾಗಾರದ ಅಂಗವಾಗಿ ವಿದ್ಯುತ್ ವಾಹನಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ತಯಾರಿಸುವ ಹಲವು ಘಟಕಗಳು ಪಾಲ್ಗೊಂಡಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.