ಬೆಂಗಳೂರು: 'ಶಕ್ತಿ’ ಯೋಜನೆಯಡಿ ಸಾರಿಗೆ ನಿಗಮಗಳ ಬಸ್‌ಗಳಲ್ಲಿ 500 ಕೋಟಿ ಬಾರಿ ಮಹಿಳೆಯರು ಪ್ರಯಾಣಿಸಿರುವುದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಕೆಆರ್‌ಟಿಸಿ, ಕೆಕೆಆರ್‌ಟಿಸಿ ಆಡಳಿತ ಮಂಡಳಿ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಪರಿಶ್ರಮ, ಪ್ರಾಮಾಣಿಕತೆ ಇದಕ್ಕೆ ಕಾರಣ. ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆ ಜಾರಿಗೊಳಿಸಿದ್ದರು ಎಂದು ಹೇಳಿದ್ದಾರೆ.
ಎರಡು ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ 5,800 ಹೊಸ ಬಸ್‌ಗಳ ಸೇರ್ಪಡೆ, 10,000 ಸಿಬ್ಬಂದಿ ನೇಮಕ, ಸಾಲ ಪಾವತಿಸಲು ಸರ್ಕಾರದಿಂದ ₹2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಸೇರಿದಂತೆ ಅನೇಕ ಬದಲಾವಣೆಗಳು ಆಗಿವೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿಗೆ ಎರಡು ಪ್ರಶಸ್ತಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೈಗೊಂಡಿರುವ ಅತ್ಯುತ್ತಮ ನೇಮಕಾತಿ ಉಪಕ್ರಮಗಳಿಗಾಗಿ ಎರಡು ಪ್ರಶಸ್ತಿಗಳು ಬಂದಿವೆ.
‘ಅವಾರ್ಡ್ ಫಾರ್ ಇನ್‌ಸ್ಟಿಟ್ಯೂಷನ್ ಬಿಲ್ಡಿಂಗ್’, ‘ಬೆಸ್ಟ್ ಇನ್‌ಕ್ಲೂಷನ್ ರಿಕ್ರ್ಯೂಟ್‌ಮೆಂಟ್ ಪ್ರೋಗ್ರಾಂ’ ಪ್ರಶಸ್ತಿಗಳನ್ನು ಸಿಂಗಪುರದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.