ಎನ್. ರವಿಕುಮಾರ್
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘವು ವಿಧಾನಸಭೆ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸಭಾಪತಿಯನ್ನು ಆಗ್ರಹಿಸಿದೆ.
‘ಎಲ್ಲ ಜನಪ್ರತಿನಿಧಿಗಳು ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಗೌರವ ನೀಡಬೇಕು. ಅಧಿಕಾರಿಗಳು ತಪ್ಪು ಮಾಡಿದಲ್ಲಿ ಕಾನೂನಿನ ಅಡಿ ಕ್ರಮ ಜರುಗಿಸಬೇಕು. ಅವರನ್ನು ಸಾರ್ವಜನಿಕವಾಗಿ ಅವಹೇಳನ ಮಾಡುವುದನ್ನು ಮುಂದುವರಿಸಿದರೆ, ಎಲ್ಲ ತಾಲ್ಲೂಕು ಮತ್ತು ಜಿಲ್ಲಾ ಕಚೇರಿಗಳ ಎದುರು ಧರಣಿ ನಡೆಸಲಾಗುವುದು’ ಎಂದು ಸಂಘದ ಅಧ್ಯಕ್ಷ ಎಲ್ ಭೈರಪ್ಪ ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.