ADVERTISEMENT

ವರ್ಗಾವಣೆ: ಸಿಎಟಿ ಮೆಟ್ಟಿಲೇರಿದ ಶರತ್

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2020, 20:42 IST
Last Updated 30 ಸೆಪ್ಟೆಂಬರ್ 2020, 20:42 IST
ಬಿ.ಶರತ್
ಬಿ.ಶರತ್   

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ದಿಢೀರ್ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮೈಸೂರಿನ ಈ ಹಿಂದಿನ ಜಿಲ್ಲಾಧಿಕಾರಿ ಬಿ.ಶರತ್ ಕೇಂದ್ರ ಆಡಳಿತ ಮಂಡಳಿ (ಸಿಎಟಿ) ಮೆಟ್ಟಿಲೇರಿದ್ದು, ರಾಜ್ಯ ಸರ್ಕಾರಕ್ಕೆ ಸಿಎಟಿ ನೋಟಿಸ್ ನೀಡಿದೆ.

ತಿಂಗಳ ಹಿಂದಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ಶರತ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ಎರಡು ದಿನಗಳ ಹಿಂದೆ ಸರ್ಕಾರ ವರ್ಗಾವಣೆ ಮಾಡಿದೆ. ಇದು ನಿಯಮ ಬಾಹಿರ ಆದೇಶವಾಗಿದ್ದು, ರದ್ದುಗೊಳಿಸಬೇಕು ಎಂದು ಶರತ್ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿರುವ ಸಿಎಟಿ, ಅಕ್ಟೋಬರ್ 6ಕ್ಕೆ ವಿಚಾರಣೆ ನಿಗದಿ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.