ADVERTISEMENT

‘ಶ್ರವಣದೋಷವುಳ್ಳ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 19:18 IST
Last Updated 7 ಜನವರಿ 2021, 19:18 IST
ಸಚಿವರಾದ ಶಶಿಕಲಾ ಜೊಲ್ಲೆಯವರು ಸಿಬ್ಬಂದಿ ಜೊತೆಗೆ ಮಾತುಕತೆ ನಡೆಸಿದರು
ಸಚಿವರಾದ ಶಶಿಕಲಾ ಜೊಲ್ಲೆಯವರು ಸಿಬ್ಬಂದಿ ಜೊತೆಗೆ ಮಾತುಕತೆ ನಡೆಸಿದರು   

ಕೆ.ಆರ್.ಪುರ: ಲಿಂಗರಾಜಪುರದಲ್ಲಿರುವ ಸುನಾದ್ ಕಿವುಡು ಮಕ್ಕಳ ಶಾಲೆ ಹಾಗೂ ಡಾ. ಎಸ್.ಆರ್ ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಭೇಟಿ ನೀಡಿದರು.

ಸಂಸ್ಥೆಯ ಮೂಲಸೌಕರ್ಯ ವ್ಯವಸ್ಥೆಯನ್ನು ಪರಿಶೀಲಿಸಿ, ಸಿಬ್ಬಂದಿ ವರ್ಗದ ಜತೆ ಸಮಾಲೋಚನೆ ನಡೆಸಿದರು.

ನಂತರ ಮಕ್ಕಳ ಶೈಕ್ಷಣಿಕ ಚಟುವಟಿಕೆ ಹಾಗೂ ಅವರು ತಯಾರಿಸಿದ ಕರಕುಶಲ ವಸ್ತುಗಳನ್ನು ವೀಕ್ಷಿಸಿ ಶುಭ ಹಾರೈಸಿದರು.

ADVERTISEMENT

‘ಶಬ್ದ ಜಗತ್ತಿನ ಪರಿಚಯವೇ ಇಲ್ಲದ ಇಂತಹ ಮಕ್ಕಳಿಗೆ ಆತ್ವವಿಶ್ವಾಸವೊಂದೇ ಆಧಾರ. ಹೀಗಾಗಿ ಇಂತಹ ಮಕ್ಕಳ ಆರೋಗ್ಯ, ಪೋಷಣೆ, ಶಿಕ್ಷಣ ಹಾಗೂ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಶ್ರವಣ ದೋಷ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ನಮ್ಮ ಶ್ರಮ ಅವಿರತವಾಗಿರುತ್ತದೆ' ಎಂದು ಹೇಳಿದರು.

ಪ್ರಾಂಶುಪಾಲರಾದ ಪದ್ಮಪ್ರಭಾ, ಆಡಳಿತಾಧಿಕಾರಿ ಜಯರಾಮ್ ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.