
ಪ್ರಜಾವಾಣಿ ವಾರ್ತೆ
ಪೀಣ್ಯ ದಾಸರಹಳ್ಳಿ: ಬೆಂಗಳೂರು ವಿಶ್ವವಿದ್ಯಾಲಯ ಆಯೋಜಿಸಿದ್ದ 10 ಕಿ.ಮೀ ದೂರದ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಸೌಂದರ್ಯ ಕಲಾ ಮತ್ತು ವಾಣಿಜ್ಯ ಸಂಜೆ ಪದವಿ ಕಾಲೇಜಿನ ವಿದ್ಯಾರ್ಥಿ ಶಿವಾಜಿ ಪರಶುರಾಮ ಮಾದಪ್ಪಗೌಡರ ಪ್ರಥಮ ಸ್ಥಾನ ಗಳಿಸಿ ಅಖಿಲ ಭಾರತ ಗುಡ್ಡಗಾಡು ಓಟ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸೌಂದರ್ಯ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸೌಂದರ್ಯ ಪಿ. ಮಂಜಪ್ಪ, ಸಿಇಒ ಎಂ. ಕೀರ್ತನ್ ಕುಮಾರ್, ನಿರ್ದೇಶಕ ವರುಣ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಸೋಮಶೇಖರಪ್ಪ ಬಿ.ಕೆ. ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.