ADVERTISEMENT

ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ 29ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2023, 15:39 IST
Last Updated 25 ಸೆಪ್ಟೆಂಬರ್ 2023, 15:39 IST
ಮುರುಘಾ ಮಠದ ಶಿವಮೂರ್ತಿ ಶರಣ
ಮುರುಘಾ ಮಠದ ಶಿವಮೂರ್ತಿ ಶರಣ   

ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದ ಆರೋಪಿ ಚಿತ್ರದುರ್ಗ ಬೃಹನ್ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ.

ಈ ಕುರಿತಂತೆ ಶರಣರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. 

‘ಪ್ರಕರಣದಲ್ಲಿ ಇಬ್ಬರು ಬಾಲಕಿಯರು ಸಂತ್ರಸ್ತೆಯರಾಗಿದ್ದು, ಒಂದೇ ಅಪರಾಧ ದಾಖಲಾಗಿದ್ದರೂ ತನಿಖಾಧಿಕಾರಿಗಳು ವಿಚಾರಣಾ ನ್ಯಾಯಾಲಯಕ್ಕೆ ಎರಡು ಪ್ರತ್ಯೇಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೀಗಾಗಿ, ಅರ್ಜಿದಾರರು ಜಾಮೀನು ಕೋರಿ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಎರಡೂ ಅರ್ಜಿಗಳನ್ನೂ ಒಟ್ಟಿಗೇ ಸೇರಿಸಿ ವಿಚಾರಣೆ ನಡೆಸುವುದು ಸೂಕ್ತ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ ಎರಡೂ ಜಾಮೀನು ಅರ್ಜಿಗಳನ್ನು ಒಟ್ಟಿಗೇ ಸೇರ್ಪಡೆ ಮಾಡುವಂತೆ ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ಇದೇ 29ಕ್ಕೆ ನಿಗದಿಪಡಿಸಿತು.

ADVERTISEMENT

ಇಬ್ಬರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು 2022ರ ಸೆಪ್ಟೆಂಬರ್ 1ರಂದು ಶಿವಮೂರ್ತಿ ಶರಣರನ್ನು ಬಂಧಿಸಿದ್ದು ಅಂದಿನಿಂದಲೂ ಅವರು ಚಿತ್ರದುರ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.