ADVERTISEMENT

ಶಿವರಾಮಕಾರಂತ ಬಡಾವಣೆ: 16 ಸಾವಿರಕ್ಕೂ ಹೆಚ್ಚು ನಿವೇಶನ ಸಿದ್ಧ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2023, 16:26 IST
Last Updated 10 ಆಗಸ್ಟ್ 2023, 16:26 IST
ಬಿಡಿಎ
ಬಿಡಿಎ   

ಬೆಂಗಳೂರು: ಡಾ.ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ 16,534 ನಿವೇಶನಗಳು ಹಂಚಿಕೆಗೆ ಸಿದ್ಧಗೊಂಡಿವೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಈ ವರ್ಷದ ಫೆಬ್ರುವರಿಯಲ್ಲಿ ಸಿವಿಲ್‌ ಕಾಮಗಾರಿಯನ್ನು ಆರಂಭಿಸಿದ್ದು, 300 ಕಿ.ಮೀ ರಸ್ತೆ ಬದಿಯ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಿದೆ. ರೈತರು ಹಾಗೂ ಅರ್ಜಿ ಸಲ್ಲಿಸಿರುವ ನಾಗರಿಕರಿಗೆ ಮುಂದಿನ ತಿಂಗಳಿನಿಂದ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಯನ್ನು ಬಿಡಿಎ ಆರಂಭಿಸಲಿದೆ.

ಈ ಬಡಾವಣೆಯ ಪ್ರಕ್ರಿಯೆಯ ಮೇಲುಸ್ತುವಾರಿಗೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್‌ ನೇತೃತ್ವದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿ ಜಯಕರ್‌ ಜೆರೋಂ ಹಾಗೂ ನಿವೃತ್ತ ಡಿಜಿಪಿ ಎಸ್‌.ಟಿ. ರಮೇಶ್  ಅವರನ್ನು ಒಳಗೊಂಡ ಸಮಿತಿ ರಚಿಸಿದೆ. 2020ರ ಡಿಸೆಂಬರ್‌ನಲ್ಲಿ ಆರಂಭವಾದ ಬಡಾವಣೆ ಯೋಜನೆಯಲ್ಲಿ 5,171 ಕಟ್ಟಡಗಳನ್ನು ಸಕ್ರಮಗೊಳಿಸಲಾಗಿದೆ.

ADVERTISEMENT

‘2,500 ಎಕರೆಗೂ ಹೆಚ್ಚು ಭೂಮಿಯಲ್ಲಿ ಪೂರ್ಣ ಪ್ರಮಾಣದ ಕಾಮಗಾರಿ ನಡೆಯುತ್ತಿದೆ. ಯಾವುದೇ ರೀತಿಯ ಅನಧಿಕೃತ ಕಟ್ಟಡಗಳು ಇರದಂತೆ ನೋಡಿಕೊಳ್ಳುವುದು ನಮ್ಮ ಪ್ರಥಮ ಆದ್ಯತೆಯಾಗಿತ್ತು’ ಎಂದು ಬಿಡಿಎ ಎಂಜಿನಿಯರೊಬ್ಬರು ತಿಳಿಸಿದರು.

ಬಿಡಿಎ ಬಡಾವಣೆಯನ್ನು ಒಂಬತ್ತು ಸೆಕ್ಟರ್‌ಗಳಾಗಿ ವಿಭಾಗಗೊಳಿಸಿದ್ದು, ಬೇರೆಬೇರೆ ಸಂಸ್ಥೆಗಳಿಗೆ ರಸ್ತೆ, ಚರಂಡಿ, ನೀರು ಪೂರೈಕೆ ಮಾರ್ಗ, ಒಳಚರಂಡಿ ಮಾರ್ಗ ಮತ್ತು ರಸ್ತೆ ಡಾಂಬರು ಕಾಮಗಾರಿಗಳನ್ನು ವಹಿಸಿದೆ. ಈ ಎಲ್ಲ ಕಾಮಗಾರಿಗಳನ್ನು ಮುಂದಿನ ವರ್ಷದ ಡಿಸೆಂಬರ್‌ಗೆ ಮುಗಿಸುವ ಗುರಿಯನ್ನು ಬಿಡಿಎ ಹೊಂದಿದೆ.

‘ಭೂಸ್ವಾಧೀನದಲ್ಲಿ ಭೂಮಿ ಕಳೆದುಕೊಂಡವರಲ್ಲಿ 1,700ಕ್ಕೂ ಹೆಚ್ಚು ರೈತರು ಅಭಿವೃದ್ದಿ ನಿವೇಶನದ ಆಯ್ಕೆ ಪಡೆದುಕೊಂಡಿದ್ದಾರೆ’ ಎಂದು ಬಿಡಿಎ ಎಂಜಿನಿಯರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.