ADVERTISEMENT

ಶಿವರಾಮ ಕಾರಂತ ಬಡಾವಣೆ: ಅರ್ಜಿ ಸಲ್ಲಿಕೆಗೆ ಏ. 30ಕೊನೆಯ ದಿನ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 17:59 IST
Last Updated 1 ಏಪ್ರಿಲ್ 2021, 17:59 IST

ಬೆಂಗಳೂರು: ಡಾ. ಕೆ. ಶಿವರಾಮಕಾರಂತ ಬಡಾವಣೆಗೆ ಗೊತ್ತುಪಡಿಸಿದ ಜಾಗದಲ್ಲಿ ಕಟ್ಟಡ ನಿರ್ಮಿಸಿದ್ದಕ್ಕೆ ಸಂಬಂಧಿಸಿದಂತೆಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು ಏಪ್ರಿಲ್ 30 ಕೊನೆಯ ದಿನ ಎಂದು ನ್ಯಾ. ಎ.ವಿ. ಚಂದ್ರಶೇಖರ್ ಸಮಿತಿ ತಿಳಿಸಿದೆ.

ಶಿವರಾಮ ಕಾರಂತ ಬಡಾವಣೆಗೆ ಗೊತ್ತುಪಡಿಸಿರುವ ಪ್ರದೇಶಗಳಲ್ಲಿ 2018ರ ಆ.3ಕ್ಕೆ ಮುಂಚಿತವಾಗಿ ನಿರ್ಮಿಸಲಾದ ಕಟ್ಟಡ ಮತ್ತು ಮನೆಗಳ ಬಗ್ಗೆ ವರದಿಯನ್ನು ನೀಡಲು ಸುಪ್ರೀಂ ಕೋರ್ಟ್‌ ನ್ಯಾ. ಎ.ವಿ. ಚಂದ್ರಶೇಖರ್ ಸಮಿತಿಯನ್ನು ನೇಮಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಮಿತಿಯು ಮಾರ್ಚ್‌ 1ರಂದು ಚಾಲನೆ ನೀಡಿತ್ತು. ಈ ಬಡಾವಣೆಯ ಅಧಿಸೂಚಿತ ಪ್ರದೇಶಗಳಲ್ಲಿ ಐದು ಸಹಾಯ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳಲ್ಲಿ ಸಮಿತಿಯು ದಾಖಲೆಗಳನ್ನು ಸಂಗ್ರಹಿಸುತ್ತಿದೆ.

ಆನ್‌ಲೈನ್ ಪೋರ್ಟಲ್ (jcc-skl.in) ಮೂಲಕವೂ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್‌ 30ರ ನಂತರ ನಂತರ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಸಮಿತಿಯು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.