ADVERTISEMENT

ಶಿವರಾತ್ರಿ | ಎಸ್‌ಎಂವಿಟಿಯಿಂದ ವಿಜಯಪುರಕ್ಕೆ ವಿಶೇಷ ರೈಲು: ವೇಳಾಪಟ್ಟಿ ಇಲ್ಲಿದೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 16:16 IST
Last Updated 29 ಜನವರಿ 2026, 16:16 IST
<div class="paragraphs"><p>ರೈಲು</p></div>

ರೈಲು

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ಎಸ್‌ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸಂಚರಿಸಲಿದೆ.

ADVERTISEMENT

ರೈಲು ಎಸ್‌ಎಂವಿಟಿಯಿಂದ ಫೆ.13ರಂದು ರಾತ್ರಿ 7.15ಕ್ಕೆ ಹೊರಡಲಿದ್ದು, ಮರುದಿನ ಬೆಳಿಗ್ಗೆ 7.15ಕ್ಕೆ ವಿಜಯಪುರ ತಲುಪಲಿದೆ. ಫೆ.16ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಡಲಿದ್ದು, ಮರುದಿನ ಬೆಳಿಗ್ಗೆ 6.30ಕ್ಕೆ ಎಸ್‌ಎಂವಿಟಿ ತಲುಪಲಿದೆ.

ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌.ಎಂ.ಎಂ. ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ಈ ರೈಲು 22 ಬೋಗಿಗಳನ್ನು ಒಳಗೊಂಡಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.