ADVERTISEMENT

ನಾಲ್ವರು ಕೊಲೆ ಆರೋಪಿಗಳಿಗೆ ಗುಂಡೇಟು

ರೌಡಿಶೀಟರ್‌ ವಿನುತ್‌ ಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 18:27 IST
Last Updated 2 ನವೆಂಬರ್ 2020, 18:27 IST
   

ಆನೇಕಲ್: ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್‌ ವಿನುತ್‌ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಸೋಮವಾರ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಕೊಲೆ ಆರೋಪಿಗಳುಆನೇಕಲ್‌ ಸುತ್ತಮುತ್ತ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. ಆಗ ಗುಂಡು ಹಾರಿಸಿದ ಪೊಲೀಸರು ಗಾಯಗೊಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರ ಗುಂಡೇಟು ತಿಂದು ಗಾಯಗೊಂಡಿರುವ ಆನೇಕಲ್‌ ಬಸವ (22), ಗೋಪಿ (23), ಗಂಗಾಧರ್‌ (23) ಮತ್ತು ಅನಂತ್‌(21) ಅವರನ್ನುಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ADVERTISEMENT

ಅಕ್ಟೋಬರ್‌ 30ರಂದು ಶೆಟ್ಟಿಹಳ್ಳಿ ಗೇಟ್ ಬಳಿ ರೌಡಿಶಿಟರ್‌ ವಿನುತ್‌ ಕೊಲೆ ಮಾಡಲಾಗಿತ್ತು. ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರ ಎರಡು ತಂಡ ರಚಿಸಲಾಗಿತ್ತು.

ಆರೋಪಿಗಳ ಜಾಡು ಹಿಡಿದ ಹೊರಟ ಪೊಲೀಸರ ತಂಡಕ್ಕೆ ಆನೇಕಲ್‌ ಆವಡದೇನಹಳ್ಳಿ ಬಳಿ ಆರೋಪಿಗಳಾದ ಗಂಗಾಧರ್‌ ಮತ್ತು ಗೋಪಿ ಇರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಗಳನ್ನು ಅನಿವಾರ್ಯವಾಗಿ ಗುಂಡು ಹಾರಿಸಿ, ಸೆರೆ ಹಿಡಿಯಬೇಕಾಯಿತು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ಮುತ್ತಾನಲ್ಲೂರು ಬಳಿ ತಲೆ ಮರೆಸಿಕೊಂಡಿದ್ದ ಇನ್ನಿಬ್ಬರು ಆರೋಪಿಗಳಾದ ಅನಂತ್‌ ಮತ್ತು ಬಸವನನ್ನು ಕೂಡ ಮತ್ತೊಂದು ತಂಡ ಇದೇ ರೀತಿ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

ಬಹುಮಾನ: ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ.ಡಿ.ಚನ್ನಣ್ಣನವರ್‌, ಆರೋಪಿಗಳನ್ನು ಬಂಧಿಸಿದ ಪೊಲೀಸ್‌ ಸಿಬ್ಬಂದಿಗೆ ₹1ಲಕ್ಷ ಬಹುಮಾನ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.