ADVERTISEMENT

ಗುಂಡೇಟು: ಡಿಜಿಪಿ ಶರ್ಮಾ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 14:53 IST
Last Updated 2 ಸೆಪ್ಟೆಂಬರ್ 2020, 14:53 IST
ಆರ್.ಪಿ.ಶರ್ಮಾ
ಆರ್.ಪಿ.ಶರ್ಮಾ   

ಬೆಂಗಳೂರು: ಐಪಿಎಸ್ ಹಿರಿಯ ಅಧಿಕಾರಿ ಆರ್.ಪಿ.ಶರ್ಮಾ ಅವರು ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡಿದ್ದು, ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಕೊತ್ತನೂರಿನ ನಿವಾಸದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಪೊಲೀಸ್ ಗೃಹಮಂಡಳಿ ನಿರ್ದೇಶಕರೂ ಆಗಿರುವ ಶರ್ಮಾ ಅವರ ಎದೆ ಹಾಗೂ ಕುತ್ತಿಗೆಗೆ ಗುಂಡೇಟು ತಗುಲಿದೆ. ಇದು ಆತ್ಮಹತ್ಯೆಗೆ ಯತ್ನಿಸಿರುವಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ. ಆಸ್ಪತ್ರೆಗೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಭೇಟಿ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್, ‘ಇದೊಂದು ಆಕಸ್ಮಿಕ ಘಟನೆ. ಶರ್ಮಾ ಅವರ ಪ್ರಾಣಕ್ಕೆ ಯಾವುದೇ ತೊಂದರೆಯಿಲ್ಲ’ಎಂದಿದ್ದಾರೆ.

ADVERTISEMENT

ಇವರಿಗೆ ಇಬ್ಬರು ಮಕ್ಕಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿರುವ ಸಾಧ್ಯತೆ ಇದೆಎಂದು ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.