ಕೆ.ಆರ್.ಪುರ: ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿ.ನಾರಾಯಣಪುರದ ಗೋವಿಂದಪ್ಪ ಕಾಂಪ್ಲೆಕ್ಸ್ ಬಳಿಯ ಯಮಹಾ ಬೈಕ್ ಶೋರೂಂನಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಶೋರೂಂ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.
ನಾಗರಭಾವಿ ನಿವಾಸಿ ಪ್ರಶಾಂತ್ ಎಂಬವರಿಗೆ ಸೇರಿದ ಶೋರೂಂನಲ್ಲಿ ಬುಧವಾರ ರಾತ್ರಿ 8.40ರ ಸುಮಾರಿಗೆ ಘಟನೆ ಸಂಭವಿಸಿದೆ. ರಾತ್ರಿ 7 ಗಂಟೆಗೆ ಶೋರೂಂನ ಸಿಬ್ಬಂದಿ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಅಗ್ನಿ ಅವಘಡದಿಂದ ಶೋರೂಂನಲ್ಲಿದ 52 ಬೈಕ್‌ಗಳು ಬೆಂಕಿಗೆ ಆಹುತಿ ಆಗಿವೆ. ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಮಾಲೀಕರು ಹೇಳಿದ್ಧಾರೆ.
ಈ ಅಗ್ನಿ ಅವಘಡದಿಂದ ಹಿಂಬದಿಯಿರುವ ಪುಷ್ಪಚಂದ್ ಚೋರ್ಡಿಯಾ ಮಾಲೀಕತ್ವದ ಖಿವ್ ರಾಜ್, ಟ್ರಯಂಪ್, ಮತ್ತು ರಾಯಲ್ ಎನ್‌ಫೀಲ್ಡ್ ಶೋರೂಂಗೂ ಬೆಂಕಿ ತಗುಲಿತ್ತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.
ಯಾವುದೇ ಪ್ರಾಣಪಾಯವಾಗಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.