ಬೆಂಗಳೂರು: ಎಚ್.ಡಿ. ದೇವೇಗೌಡ ಅಭಿನಂದನಾ ಸಮಿತಿಯು ಇದೇ ಭಾನುವಾರ (ಜೂನ್ 22) ಮಧ್ಯಾಹ್ನ 2 ಗಂಟೆಗೆ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ ಪ್ರಶಸ್ತಿ’ ಹಾಗೂ 93 ಸಾಧಕರಿಗೆ ‘ಎಚ್.ಡಿ. ದೇವೇಗೌಡ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಸುಮ್ಮನಹಳ್ಳಿ ಜಂಕ್ಷನ್ ಬಳಿ ಇರುವ ಡಾ. ಬಾಬು ಜಗಜೀವನ್ ರಾಮ್ ಭವನದಲ್ಲಿ ಹಮ್ಮಿಕೊಂಡಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿನಂದನಾ ಸಮಿತಿ ಅಧ್ಯಕ್ಷ ಅ. ದೇವೇಗೌಡ, ‘ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಬದುಕು ಮತ್ತು ಸಾಧನೆ’ ಪುಸಕ್ತವನ್ನು ಇದೇ ಸಮಾರಂಭದಲ್ಲಿ ಬಿಡುಗಡೆ ಮಾಡಲಾಗುತ್ತದೆ. ವಿವಿಧ ಮಠಾಧೀಶರು ಸಮಾರಂಭದಲ್ಲಿ ಭಾಗವಹಿಸುತ್ತಾರೆ. ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಅಭಿನಂದನಾ ನುಡಿಗಳನ್ನಾಡುತ್ತಾರೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸುತ್ತಾರೆ’ ಎಂದು ತಿಳಿಸಿದರು.
‘ದೇವೇಗೌಡ ಅವರ 93ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಈ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.