ADVERTISEMENT

ಅನಾರೋಗ್ಯ; ರಂಗಕರ್ಮಿ ವಿ. ರಾಮಮೂರ್ತಿ ನಿಧನ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 3:50 IST
Last Updated 15 ಏಪ್ರಿಲ್ 2021, 3:50 IST
   

ಬೆಂಗಳೂರು: ಬೆಳಕಿನ ಸಂಯೋಜನೆಯಲ್ಲಿ ನಿಷ್ಣಾತರಾಗಿದ್ದ ರಂಗಕರ್ಮಿ ವಿ. ರಾಮಮೂರ್ತಿ (86) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅವರು ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು.

ನಿರ್ದೇಶನ, ಅಭಿನಯ, ಮೂಕಾಭಿನಯ, ರಂಗವಿನ್ಯಾಸ, ಬೆಳಕು ವಿನ್ಯಾಸ, ರಂಗಸಂಗೀತ, ಪ್ರಸಾಧನ ಹಾಗೂ ವಸ್ತ್ರವಿನ್ಯಾಸ ಸೇರಿದಂತೆ ರಂಗಭೂಮಿಯ ಎಲ್ಲ ವಿಭಾಗಗಳಲ್ಲಿ ಪರಿಣತಿ ಸಾಧಿಸಿದ್ದ ಅವರು, ಬೆಳಕಿನ ಸಂಯೋಜನೆಯಲ್ಲಿ ನಿಷ್ಣಾತರಾಗಿದ್ದರು.

ADVERTISEMENT

ದೇಶದ ವಿವಿಧೆಡೆ ಸುಮಾರು 50ಕ್ಕೂ ಹೆಚ್ಚು ರಂಗಶಾಲೆಗಳಿಗೆ ಸಲಹೆಗಾರರಾಗಿ, 8 ವಿಶ್ವವಿದ್ಯಾಲಯಗಳ ರಂಗಭೂಮಿ ವಿಭಾಗಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಬಿ.ವಿ.ಕಾರಂತ ಸ್ಮೃತಿ ಪುರಸ್ಕಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.