ಬೆಂಗಳೂರು: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಮೂತ್ರದ ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದ ಅವರುಸೋಮವಾರ ರಾತ್ರಿ 11.30ಕ್ಕೆಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಇದೇ ಆಸ್ಪತ್ರೆಯಲ್ಲಿದ್ದಾರೆ.
ಕೊರೊನಾ ಪಾಸಿಟಿವ್ ದೃಢಪಟ್ಟಿರುವ ಬಗ್ಗೆ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.