
ಬೆಂಗಳೂರು: ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹೊನ್ನಾರು ರಂಗೋತ್ಸವವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಉಮಾಶ್ರೀ, ಪ್ರಕಾಶ್ ರಾಜ್ ಸೇರಿದಂತೆ ಬಹುತೇಕ ರಂಗಭೂಮಿ ಕಲಾವಿದರು ಚಲನಚಿತ್ರ ಕ್ಷೇತ್ರದಲ್ಲಿ ಬೆಳೆದಿದ್ದಾರೆ. ರಂಗಭೂಮಿಯಲ್ಲಿ ಕೆಲಸ ಮಾಡಿದವರೇ ಸಿನಿಮಾರಂಗದಲ್ಲಿಯೂ ಹೆಸರು ಮಾಡಿದ್ದಾರೆ ಎಂದು ಹೇಳಿದರು.
ಹಿಂದಿನ ಸಿನಿಮಾಗಳಲ್ಲಿ ಉತ್ತಮ ಸಂದೇಶಗಳಿರುತ್ತಿದ್ದವು. ಈಗ ಉತ್ತಮ ಸಂದೇಶಗಳ ಸಿನಿಮಾಗಳು ಇಲ್ಲವಾಗಿವೆ. ಕುಟುಂಬ ಸಮೇತ ನೋಡುವ ಸಿನಿಮಾಗಳೂ ಬರುತ್ತಿಲ್ಲ. ಅಲ್ಲದೇ ಮೊಬೈಲ್, ಟಿ.ವಿ.ಗಳಿಂದಾಗಿ ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುವ ಅಭಿರುಚಿ ಇಲ್ಲವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಚಿತ್ರನಟರಾದ ಮುಖ್ಯಮಂತ್ರಿ ಚಂದ್ರು, ಪ್ರಕಾಶ್ ರಾಜ್, ಕಲಾವಿದರಾದ ದತ್ತಣ್ಣ, ಗಿರಿಜಾ ಲೋಕೇಶ್, ನಿರ್ದೇಶಕ ಟಿ.ಎಸ್. ನಾಗಾಭರಣ, ಹೊನ್ನಾರು ರಂಗೋತ್ಸವ ಸಂಚಾಲಕರಾದ ಶ್ರೀನಿವಾಸ ಜಿ. ಕಪ್ಪಣ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.