ADVERTISEMENT

ಲಖಿಂಪುರ ಹಿಂಸಾಚಾರ: ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ –ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 8:48 IST
Last Updated 4 ಅಕ್ಟೋಬರ್ 2021, 8:48 IST
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ಉತ್ತರ ಪ್ರದೇಶದಲ್ಲಿ ನಡೆದ ಘಟನೆಯನ್ನು ಖಂಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‘ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ’ ಎಂದು ಕಿಡಿಕಾರಿದ್ದಾರೆ.

ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಉತ್ತರಪ್ರದೇಶದ ಯೋಗಿ ಆದಿತ್ಯನಾಥ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ಸರ್ಕಾರ, ತನ್ನ ತಾಲಿಬಾನಿ‌ ಮನಸ್ಥಿತಿಯನ್ನು ಬತ್ತಲು‌ ಮಾಡಿಕೊಳ್ಳುತ್ತಿದೆ. ರೈತರ‌ ಹತ್ಯೆ ನಡೆದ ಸ್ಥಳಕ್ಕೆ ಭೇಟಿ‌ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ ಸರ್ಕಾರದ ಕೃತ್ಯ ಖಂಡನೀಯ’ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.