ADVERTISEMENT

ಇಂದಿರಾ ಕ್ಯಾಂಟೀನ್‌ಗಳಿಗೆ ಸರ್ಕಾರ ಅನುದಾನ ನೀಡಲಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 2:06 IST
Last Updated 2 ಮಾರ್ಚ್ 2020, 2:06 IST
   

ಬೆಂಗಳೂರು: ‘ಬಿಬಿಎಂಪಿಯೇ ಇಂದಿರಾ ಕ್ಯಾಂಟೀನ್‌ ನಡೆಸಲಿ ಎಂದು ಹೇಳುವುದು ಸರಿಯಲ್ಲ. ರಾಜ್ಯ ಸರ್ಕಾರವೇ ಇದಕ್ಕಾಗಿ ಅನುದಾನ ನೀಡಬೇಕು. ಇದು ಸರ್ಕಾರದ ಜವಾಬ್ದಾರಿ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ‘ರಾಜ್ಯದ ಎಲ್ಲ ಜಿಲ್ಲೆಗಳಿಂದ ಬೆಂಗಳೂರಿಗೆ ಜನ ಬರುತ್ತಾರೆ. ಕಾರ್ಮಿಕರು, ಆಟೊ ಚಾಲಕರು, ಕಾಲೇಜು ವಿದ್ಯಾರ್ಥಿಗಳೇ ಹೆಚ್ಚು. ಇವರಿಗೆ ಇಂದಿರಾ ಕ್ಯಾಂಟೀನ್‌ನಿಂದ ಹೆಚ್ಚು ಅನುಕೂಲವಾಗುತ್ತದೆ’ ಎಂದರು.

‘ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್‌ನ ಊಟ, ಉಪಾಹಾರ ದರ ಏರಿಕೆ ಮಾಡಬಾರದು. ಈಗಿರುವ ದರದಲ್ಲಿಯೇ ಆಹಾರ ಪೂರೈಸಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

**
ನಗರದ ಪುರಭವನ ಎದುರು ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂಬ ಬಿಬಿಎಂಪಿ ನಿರ್ಣಯ ಅತ್ಯಂತ ಕೆಟ್ಟ ನಡೆ. ಅಲ್ಲಿ ಪ್ರತಿಭಟಿಸಲು ಅವಕಾಶ ನೀಡಬೇಕು.
-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.