ADVERTISEMENT

ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ‍‍‍ಪೋಸ್ಟ್‌; ಪೊಲೀಸರಿಗೆ ದೂರು

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 16:35 IST
Last Updated 5 ಆಗಸ್ಟ್ 2020, 16:35 IST

ಬೆಂಗಳೂರು: ‘ಕೋವಿಡ್‌ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ ಅವರು ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ.

‘ಸಿದ್ದರಾಮಯ್ಯ ಮಣಿ‍ಪಾಲ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿಯನ್ನು ಕೆಲವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಮಂಜು ಹಾಗೂ ಆನಂದ್ ಕುಮಾರ್ ಎಂಬುವರು, ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಅಭಿಮಾನಿಗಳ ಭಾವನೆಗೆ ಧಕ್ಕೆಯಾಗುವಂತೆ ಮಾಡಿದ್ದಾರೆ. ಇಬ್ಬರ ವಿರುದ್ಧ ಕಾನೂನು ಕೈಗೊಳ್ಳಬೇಕು’ ಎಂದೂ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಕಬ್ಬನ್‌ಪಾರ್ಕ್ ಪೊಲೀಸರು, ‘ದೂರು ಪರಿಶೀಲಿಸಲಾಗುತ್ತಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.