ADVERTISEMENT

ಬೆಂಗಳೂರು: ಜನವರಿ 14ರಿಂದ ಸಿದ್ಧರಾಮೇಶ್ವರ ಜಯಂತಿ

​ಪ್ರಜಾವಾಣಿ ವಾರ್ತೆ
Published 11 ಜನವರಿ 2025, 19:23 IST
Last Updated 11 ಜನವರಿ 2025, 19:23 IST
ಸಿದ್ಧರಾಮೇಶ್ವರ ಸ್ವಾಮಿ 
ಸಿದ್ಧರಾಮೇಶ್ವರ ಸ್ವಾಮಿ    

ಬೆಂಗಳೂರು: ನೊಳಂಬ ಲಿಂಗಾಯತ ಸಂಘದಿಂದ ಜನವರಿ 14 ಮತ್ತು 15ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಶ್ರೀಗುರು ಸಿದ್ಧರಾಮೇಶ್ವರ ಜಯಂತಿ ಆಯೋಜಿಸಲಾಗಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಜಯಂತ್ಯುತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಎನ್. ಸಿದ್ಧರಾಮಪ್ಪ ಅವರು, ‘ಕೆರಗೋಡಿ ರಂಗಾಪುರದ ಪೀಠಾಧ್ಯಕ್ಷ ಗುರು ಪರದೇಶಿ ಕೇಂದ್ರ ಸ್ವಾಮೀಜಿ ಅವರು ಜ. 14ರಂದು ನಡೆಯುವ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸ
ಲಿದ್ದು, ಮಾಜಿ ಸಂಸದ ಜಿ.ಎಸ್. ಬಸವರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ನೊಳಂಬ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ.

ADVERTISEMENT


ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನೊಳಂಬ ಇತಿಹಾಸ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ’ ಎಂದರು.

‘15ರಂದು ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಶಾಸಕ ಶಾಮನೂರು ಶಿವಶಂಕರಪ್ಪ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.