ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರೋಧಿಸಿ ಟ್ಯಾನರಿ ರಸ್ತೆಯಲ್ಲಿ ನಡೆಯುತ್ತಿರುವ ‘ಬಿಲಾಲ್ ಬಾಗ್’ ಅನಿರ್ದಿಷ್ಟಾವಧಿ ಧರಣಿಗೆ ಸಿಖ್ ಸಮುದಾಯದ ಯುವಕರು ಬೆಂಬಲ ಸೂಚಿಸಿದರು.
ಧರಣಿ ಸ್ಥಳಕ್ಕೆ ಭಾನುವಾರ ಮಧ್ಯಾಹ್ನ ಭೇಟಿ ನೀಡಿದ್ದ ಯುವಕರ ತಂಡ, ಗುರುನಾನಕ್ ಅವರ ಕೀರ್ತ
ನೆಗಳನ್ನು ಹಾಡಿದರು.ಪ್ರತಿಭಟನಕಾರರ ಜೊತೆ ಬೆರೆತು, ‘ನಿಮ್ಮೊಂದಿಗೆ ನಾವೂ ಇದ್ದೇವೆ’ ಎಂದು ಘೋಷಿಸಿದರು.
‘ನಮ್ಮದು ಸರ್ವಧರ್ಮಗಳ ದೇಶ. ಇಂಥ ದೇಶವನ್ನು ಒಡೆಯಲು ಕೇಂದ್ರ ಸರ್ಕಾರ ಇಂಥ ಕಾನೂನು
ಗಳನ್ನು ಜಾರಿಗೆ ತರುತ್ತಿದೆ.ಇದನ್ನು ನಾವೆಲ್ಲರೂ ಖಂಡಿಸುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.