ADVERTISEMENT

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ ಸಿಮ್ಯಾಕ್ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 19:46 IST
Last Updated 11 ಅಕ್ಟೋಬರ್ 2021, 19:46 IST
ಸಚಿವ ಎಂಟಿಬಿ ನಾಗರಾಜ್ ಅವರು ಸಂಸ್ಥೆಯ ಸಿಬ್ಬಂದಿಗೆ ಪ್ರಶಸ್ತಿ ಪತ್ರ ಮತ್ತು ಫಲಕ ವಿತರಿಸಿದರು. ಸಚಿವ ಬೈರತಿ ಬಸವರಾಜ್, ಸಂಸ್ಥೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಎಸ್. ಲತಾ ಇದ್ದರು
ಸಚಿವ ಎಂಟಿಬಿ ನಾಗರಾಜ್ ಅವರು ಸಂಸ್ಥೆಯ ಸಿಬ್ಬಂದಿಗೆ ಪ್ರಶಸ್ತಿ ಪತ್ರ ಮತ್ತು ಫಲಕ ವಿತರಿಸಿದರು. ಸಚಿವ ಬೈರತಿ ಬಸವರಾಜ್, ಸಂಸ್ಥೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಎಸ್. ಲತಾ ಇದ್ದರು   

ಬೆಂಗಳೂರು: ಕೆಎಸ್‌ಆರ್‌ಟಿಸಿ ಉಪಕ್ರಮಗಳಾದ ‘ಫ್ಲೈಬಸ್’ ಮತ್ತು ‘ಸ್ವಚ್ಛತೆಯೇ ಸೇವೆ’ಗೆ ಸಿಮ್ಯಾಕ್(ಸಿಟಿ ಮ್ಯಾನೇಜರ್ಸ್‌ ಅಸೋಸಿಯೇಷನ್‌) ಸಂಸ್ಥೆಯ 2018–19ನೇ ಸಾಲಿನ ಮೊದಲನೇ ಮತು 2019–20ನೇ ಸಾಲಿನ ದ್ವಿತೀಯ ಪ್ರಶಸ್ತಿ ಲಭಿಸಿದೆ.

₹1 ಲಕ್ಷ ಮತ್ತು ₹75 ಸಾವಿರ ನಗದು ಒಳಗೊಂಡ ಪ್ರಶಸ್ತಿಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮತ್ತು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಸಮರ್ಪಿಸಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.

ಬಿಎಂಟಿಸಿಗೆ 2018–19ನೇ ಸಾಲಿನ ದ್ವಿತೀಯ ಮತ್ತು 2019–20ನೇ ಸಾಲಿನ ಪ್ರಥಮ ಬಹುಮಾನ ದೊರೆತಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.