ಯಲಹಂಕ: ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಬಿ.ಎನ್.ಸುನಂದ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿ.ಸಿ.ಮಂಜುನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕಾಗಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಒಟ್ಟು 23 ಸದಸ್ಯಬಲ ಹೊಂದಿರುವ ಪಂಚಾಯಿತಿಯಲ್ಲಿ ಸುನಂದ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮರಾವತಮ್ಮ, ಮಾಜಿ ಅಧ್ಯಕ್ಷ ಟಿ.ಮುನಿರೆಡ್ಡಿ, ಸದಸ್ಯರಾದ ಎಸ್.ಜಿ.ಪ್ರಶಾಂತ್‌ರೆಡ್ಡಿ, ಡಿ.ಹೇಮಂತ್‌ಕುಮಾರ್, ನಂಜೇಗೌಡ, ಕೆ.ಬಾಬು, ಮಲ್ಲೇಶ್, ಪದ್ಮಶ್ರೀ, ಭಾಗ್ಯಲಕ್ಷ್ಮಿ, ಜೀವಿತ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಡಿ.ಜಿ.ಅಪ್ಪಯಣ್ಣ, ವಿಜಯಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.