ADVERTISEMENT

ಬೆಂಗಳೂರು | ಏಕಬಳಕೆ ಪ್ಲಾಸ್ಟಿಕ್ ವಶ: ₹2.76 ಲಕ್ಷ ದಂಡ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 16:04 IST
Last Updated 19 ಸೆಪ್ಟೆಂಬರ್ 2025, 16:04 IST
   

ಬೆಂಗಳೂರು: ಉತ್ತರ ನಗರ ಪಾಲಿಕೆಯ ವಿವಿಧ ವಾಣಿಜ್ಯ ಮಳಿಗೆಗಳಿಗೆ ಹಾಗೂ ದಾಸ್ತಾನು ಕೇಂದ್ರಗಳಿಗೆ ಭೇಟಿ ನೀಡಿದ ಅಧಿಕಾರಿಗಳು 350 ಕೆ.ಜಿ. ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು, ₹2.76 ಲಕ್ಷ ದಂಡ ವಿಧಿಸಿದರು.

ಘನತ್ಯಾಜ್ಯ ವಿಭಾಗದ ಎಂಜಿನಿಯರ್‌, ಆರೋಗ್ಯ ನಿರೀಕ್ಷಕರು ಮತ್ತು ಮಾರ್ಷಲ್ ತಂಡದ ಸಹಯೋಗದಲ್ಲಿ ಪ್ಲಾಸ್ಟಿಕ್ ವಿರುದ್ಧ ತಪಾಸಣೆ ಹಾಗೂ ಜಾಗೃತಿ ಅಭಿಯಾನ ನಡೆಸಿದರು.

ಎಚ್‌ಬಿಆರ್ ಲೇಔಟ್‌ನಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಕಸ‌ ಎಸೆಯುವವರಿಗೆ ದಂಡ ವಿಧಿಸಲಾಯಿತು. ರಸ್ತೆ ಪಕ್ಕದಲ್ಲಿ ಕಸ ಎಸೆಯದಂತೆ ಎಚ್ಚರಿಕೆ ನೀಡಲಾಯಿತು.

ADVERTISEMENT

ವಿದ್ಯಾರಣ್ಯಪುರದ ಮಸ್ಟರಿಂಗ್ ಪಾಯಿಂಟ್‌ನಲ್ಲಿ ಪೌರಕಾರ್ಮಿಕರಿಗಾಗಿ ಆರೋಗ್ಯ ಶಿಬಿರ ಆಯೋಜಿಸಲಾಯಿತು. ರಕ್ತದೊತ್ತಡ, ಮಧುಮೇಹ ಮತ್ತು ಹಿಮೋಗ್ಲೋಬಿನ್ ಪರೀಕ್ಷೆ ನಡೆಸಿ, ಸೂಕ್ತ ಆರೋಗ್ಯ ಸಲಹೆ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.