ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ, ಅಲ್ಪಸಂಖ್ಯಾತ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯನ್ನು ಗಣನೀಯವಾಗಿ ಹೆಚ್ಚಿಸುವಂತೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾ (ಎಸ್‌ಐಒ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಐದು ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿರುವ ಈ ಶಿಫಾರಸುಗಳ ಪತ್ರವನ್ನು ಎಸ್‌ಐಒ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯ್ಯಾನ್ ಸರ್ಕಾರಕ್ಕೆ ಸಲ್ಲಿಸಿ, ಶಿಕ್ಷಣವು ರಾಷ್ಟ್ರ ನಿರ್ಮಾಣದ ಮೂಲಾಧಾರವಾಗಿದ್ದು, ಸಮಾನ ಹಂಚಿಕೆ ಮತ್ತು ಕಟ್ಟುನಿಟ್ಟಿನ ಉತ್ತರದಾಯಿತ್ವ ಅಗತ್ಯ ಎಂದರು.
‘2025–26ರಲ್ಲಿ ಕರ್ನಾಟಕದ ಒಟ್ಟು ಬಜೆಟ್‌ನ ಶೇಕಡ 10.8 ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ದೇಶದ ಸರಾಸರಿ ಹಂಚಿಕೆ ಶೇ 15 ಆಗಿದ್ದು, ಕೇರಳ ಮತ್ತು ತಮಿಳುನಾಡು ರಾಜ್ಯಗಳು ಈ ಮಟ್ಟದ ಹಂಚಿಕೆಯನ್ನು ನಿರಂತರವಾಗಿ ಪಾಲಿಸುತ್ತಿವೆ. ರಾಜ್ಯವು ಈ ಅಂತರವನ್ನು ನಿವಾರಿಸಬೇಕು’ ಎಂದು ಸಂಘಟನೆ ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.