
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಇನ್‌ಸ್ಟಿಟ್ಯೂಟ್ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್
ಆಫ್ ಇಂಡಿಯಾದ (ಐಸಿಎಐ) ಬೆಂಗಳೂರು ಶಾಖೆಯು ಇದೇ 12 ಮತ್ತು 13ರಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಐದನೇ ಆವೃತ್ತಿಯ ಐಸಿಎಐ ಸಮ್ಮೇಳನ ಹಮ್ಮಿಕೊಂಡಿದೆ.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಸಿಎಐ ಬೆಂಗಳೂರು ಶಾಖೆಯ ಕಾರ್ಯದರ್ಶಿ ತುಪ್ಪದ ವಿರೂಪಾಕ್ಷಪ್ಪಮುಪ್ಪಣ್ಣ, ‘ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿ ಮಂಜುಳಾ ಎನ್. ಅವರು ಸಮ್ಮೇಳನ ಉದ್ಘಾಟಿಸುತ್ತಾರೆ. ಲೆಕ್ಕಪರಿಶೋಧಕರಾದ
ಪ್ರಸನ್ನ ಕುಮಾರ್ ಡಿ., ಸಂಜೀವ್ ಸಂಘಿ, ಅಭಯ್ ಛಾಜೇದ್, ಮಧುಕರ್ ಎನ್. ಹಿರೇಗಂಗೆ ಮತ್ತು ಮಂಜುನಾಥ್ ಎಂ. ಹಳ್ಳೂರ್ ಭಾಗವಹಿಸಲಿದ್ದಾರೆ’ ಎಂದು ಹೇಳಿದರು.
‘ಎರಡು ದಿನಗಳ ಈ ಸಮ್ಮೇಳನದಲ್ಲಿ ಲೆಕ್ಕಪರಿಶೋಧನೆ ಕ್ಷೇತ್ರಕ್ಕೆ ಸಂಬಂಧಿಸಿದ ಚರ್ಚೆಗಳು ನಡೆಯಲಿವೆ. ದೇಶದ ವಿವಿಧ ಭಾಗಗಳಿಂದ ವಿಷಯ ತಜ್ಞರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.